×
Ad

ದಿಲ್ಲಿಯಲ್ಲಿ ಗುಂಡಿನ ದಾಳಿ ಖಂಡಿಸಿ ಬಂಟ್ವಾಳ ಎಸ್ ಡಿಪಿಐಯಿಂದ ಪ್ರತಿಭಟ‌ನೆ

Update: 2020-02-01 22:44 IST

ಬಂಟ್ವಾಳ, ಫೆ.1: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ವಿರೋಧಿಸಿ ದಿಲ್ಲಿ ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದ ಬಳಿ ಪ್ರತಿಭಟನೆ ನಡೆಸುತ್ತಿರುವವರ  ಮೇಲೆ ಗುಂಡಿನ ದಾಳಿ ನಡೆಸಿ ವಿದ್ಯಾರ್ಥಿಯೋರ್ವನನ್ನು ಗಾಯಗೊಳಿಸಿರುವ ಘಟನೆಯನ್ನು ಖಂಡಿಸಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು. 

ಪ್ರತಿಭಟನೆಯಲ್ಲಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮುಖ್ಯ ಭಾಷಣ ಮಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್., ಸದಸ್ಯ ಅಶ್ರಫ್ ಮಂಚಿ, ಬಂಟ್ವಾಳ ವಿಧಾನಸಭಾ ಕ್ಷೇತ ಅಧ್ಯಕ್ಷ ಯೂಸುಫ್ ಆಲಡ್ಕ ಸಹಿತ ಇತರ ಮುಖಂಡರು ಉಪಸ್ಥಿತರಿದ್ದರು.

ಬಂಟ್ಬಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಮಾಲಿಕ್ ಕೊಳಕೆ ಸ್ವಾಗತಿಸಿದರು. ಮುಬಾರಕ್ ಗೂಡಿನಬಳಿ ನಿರೂಪಿಸಿ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News