ಭಾರತದಲ್ಲಿ ಎರಡನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ

Update: 2020-02-02 18:07 GMT

ತಿರುವನಂತಪುರ, ಫೆ. 2: ಕೊರೋನಾ ವೈರಸ್ ಸೋಂಕಿನ ಇನ್ನೊಂದು ಪ್ರಕರಣ ಆಲಪ್ಪುಳದಲ್ಲಿ ಬೆಳಕಿಗೆ ಬಂದಿದೆ. ಇದು ದೇಶದಲ್ಲಿ ಕಂಡು ಬಂದ ಎರಡನೇ ಕೊರೋನಾ ವೈರಸ್ ಸೋಂಕಿನ ಪ್ರಕರಣವಾಗಿದೆ.

  ಚೀನಾದಿಂದ ಜನವರಿ 24ರಂದು ಹಿಂದಿರುಗಿದ ವುಹಾನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯ ರಕ್ತ ಮಾದರಿಯ ಪರೀಕ್ಷೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಆಲಪ್ಪುಳದ ಸರಕಾರಿ ವೈದ್ಯಕೀಯ ಕಾಲೇಜಿನ ತೀವ್ರ ನಿಗಾ ಘಟಕದಲ್ಲಿ ವಿದ್ಯಾರ್ಥಿಯನ್ನು ದಾಖಲಿಸಲಾಗಿದೆ ಎಂದು ಅದು ಹೇಳಿದೆ.

ಈ ನಡುವೆ, ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ, ವೈರಾಣು ಕುರಿತು ಇರುವ ರಾಷ್ಟ್ರೀಯ ಸಂಸ್ಥೆಯ ರಕ್ತ ಮಾದರಿಯ ಪರೀಕ್ಷೆಯ ಫಲಿತಾಂಶ ಇನ್ನಷ್ಟೇ ಕೈ ಸೇರಬೇಕಾಗಿದೆ ಎಂದಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 1,793 ವ್ಯಕ್ತಿಗಳನ್ನು ದಿಗ್ಭಂದನದಲ್ಲಿ ಇರಿಸಲಾಗಿದೆ. ಇವರಲ್ಲಿ 70 ವ್ಯಕ್ತಿಗಳನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ ಎಂದು ಕೆ.ಕೆ. ಶೈಲಜಾ ಅವರು ಕೊಲ್ಲಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಶೈಲಜಾ ಅವರು ತುರ್ತು ಸಭೆ ನಡೆಸಿದ್ದಾರೆ. ಅಲ್ಲದೆ, ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಆಲಪ್ಪುಳ ವೈದ್ಯಕೀಯ ಕಾಲೇಜಿನಲ್ಲಿ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News