ಕೊರೊನಾ ವೈರಸ್ ಭೀತಿ : ದ.ಕ. ಸೇರಿ ರಾಜ್ಯದ 4 ಜಿಲ್ಲೆಗಳಲ್ಲಿ ಹೈ ಅಲರ್ಟ್
Update: 2020-02-03 14:21 IST
ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ವಿದ್ಯಾರ್ಥಿಯೋರ್ವನಲ್ಲಿ ಕೊರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ದ.ಕ. ಜಿಲ್ಲೆ, ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಹೈ ಅಲರ್ಟ್ ಘೋಷಿಸಿದೆ.
ಕೇರಳದ ಗಡಿ ಭಾಗವಾದ ಮಂಗಳೂರು, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡದಂತೆ ಹೈ ಅಲರ್ಟ್ ಹಾಗು ಇಂತಹ ಸೋಂಕು ಪತ್ತೆಯಾದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.