×
Ad

ಸ್ಕೂಟರ್‌ನಿಂದ ಬಿದ್ದು ಯುವಕ ಸಾವು

Update: 2020-02-03 17:39 IST

ಬೆಂಗಳೂರು, ಫೆ.3: ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಇಲ್ಲಿನ ಹೊರಮಾವು ಅಗರ ಮುಖ್ಯರಸ್ತೆಯಲ್ಲಿ ನಡೆದಿದೆ.

ವಡ್ಡರಪಾಳ್ಯದ ಸುದೀಪ್ ನಾಯ್ಡು(30) ಮೃತ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಯ್ಡು, ರವಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ಸಾಗುತ್ತಿದ್ದರು. ಮಾರ್ಗಮಧ್ಯೆ ಹೊರಮಾವು ಅಗರ ಮುಖ್ಯರಸ್ತೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ನಾಯ್ಡು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿರುವ ಬಾಣಸವಾಡಿ ಸಂಚಾರ ಠಾಣಾ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News