106 ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2020-02-03 12:18 GMT

ಬೆಂಗಳೂರು, ಫೆ.3 : ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಿದೆ.

2017-18ನೇ ಸಾಲಿನ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಇದಾಗಿದೆ. ಪೂರ್ವಭಾವಿ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 11 ಇಲಾಖೆಗಳಲ್ಲಿ ಗ್ರೂಪ್-ಎ, ಗ್ರೂಪ್-ಬಿ ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ವಯಸ್ಸು: ಕನಿಷ್ಠ 21 ವರ್ಷಗಳಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ಹಾಗೂ ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು 40 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳು 600, ಹಿಂದುಳಿದ ವರ್ಗದ ಅಭ್ಯರ್ಥಿಗಳು 300, ಮಾಜಿ ಸೈನಿಕರಿಗೆ 50 ರೂ. ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದರೆ, ಎಲ್ಲರೂ ಕಡ್ಡಾಯವಾಗಿ ಪ್ರೊಸೆಸಿಂಗ್ ಚಾರ್ಜ್ 35 ರೂ. ಪಾವತಿಸಬೇಕು. ಅರ್ಜಿ ಶುಲ್ಕ ಪಾವತಿಸುವ ಅಭ್ಯರ್ಥಿಗಳೂ ಹೆಚ್ಚುವರಿ ಶುಲ್ಕ ಭರಿಸಬೇಕಿದೆ.

ನೇಮಕಾತಿ: ನೇಮಕಾತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ಅನ್ನು ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ: ಲೋಕಸೇವಾ ಆಯೋಗದ ವೆಬ್‌ಸೈಟ್‌ನಲ್ಲಿ ಲಾಗಿನ್ ಆಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳು ತಮ್ಮ ವಿವರ, ಶೈಕ್ಷಣಿಕ ಅರ್ಹತೆ ವಿವರ ಮತ್ತು ಇತರೆ ವಿವರಗಳನ್ನು ತುಂಬಬೇಕು. ಬಳಿಕ ಅರ್ಜಿಯನ್ನು ಸಲ್ಲಿಸಬೇಕು. ಅಂತಿಮ ಹಂತದಲ್ಲಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಬೇಕಿರುತ್ತದೆ.

-ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06-03-2020

-ಪೂರ್ವಭಾವಿ ಪರೀಕ್ಷಾ ದಿನಾಂಕ: 17-05-2020

-ಮುಖ್ಯ ಪರೀಕ್ಷಾ ದಿನಾಂಕ: 2020 ರ ಆಗಸ್ಟ್ ಹಾಗೂ ಸೆಪ್ಟೆಂಬರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News