ಫೆ.6: ರಾಜೀವ್‌ಗಾಂಧಿ ಪಂಚಾಯತ್‌ರಾಜ್ ವತಿಯಿಂದ ಸಿಎಎ, ಎನ್‌ಆರ್‌ಸಿ ಕುರಿತು ವಿಚಾರ ಸಂಕಿರಣ
ಉಡುಪಿ, ಫೆ. 3: ಉಡುಪಿ ಜಿಲ್ಲಾ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ವತಿಯಿಂದ ಕೇಂದ್ರ ಸರಕಾರದ ಸಂವಿಧಾನ ಹಾಗೂ ಜನವಿರೋಧಿ ನೀತಿಗಳಾದ ಸಿಎಎ, ಎನ್‌ಆರ್‌ಸಿ-ಎನ್‌ಪಿಆರ್ ಕುರಿತು ಫೆ.6ರಂದು ಬೆಳಗ್ಗೆ 10ರಿಂದ ಅಪರಾಹ್ನ 1 ಗಂಟೆಯವರೆಗೆ ಪುರಭವನದ ಹಾಲ್ನಲ್ಲಿ ವಿಚಾರಸಂಕಿರಣ ಏರ್ಪಡಿಸಲಾಗಿದೆ.
ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಸಂವಿಧಾನ ವಿರೋಧಿ ಕಾಯ್ದೆಗಳಾದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳಿಂದ ಉದ್ಭವಿಸ ಬಹುದಾದ ದುಷ್ಟರಿಣಾಮಗಳನ್ನು ಜನರಿಗೆ ತಿಳಿಸುವ ಹಾಗೂ ನಮ್ಮೆಲ್ಲರ ಪೌರತ್ವವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಈ ವಿಚಾರ ಸಂಕಿರಣವನ್ನು ಆಜಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.
ವಿಚಾರಸಂಕಿರಣದಲ್ಲಿ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್, ಕೆಪಿಸಿಸಿ ವಕ್ತಾರರು, ಮಾಜಿ ಸಂಸದರೂ ಆದ ಉಗ್ರಪ್ಪ ಹಾಗೂ ಖ್ಯಾತ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಶಿವಸುಂದರ್ ಭಾಗಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು, ಸದಸ್ಯರು, ಜಿಲ್ಲಾ ಮತು ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿ ದ್ದಾರೆ ಎಂದು ಉಡುಪಿ ಜಿಲ್ಲಾ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಗೌರವ ಸಲಹೆಗಾರರಾದ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.