ಮಂಗಳೂರು ಗೋಲಿಬಾರ್ ಪ್ರಕರಣ: ಫೆ.6ರಂದು ಸಾಕ್ಷ್ಯ/ಹೇಳಿಕೆ ನೀಡಲು ಅಂತಿಮ ಅವಕಾಶ
Update: 2020-02-03 22:07 IST
ಮಂಗಳೂರು, ಫೆ.3: ನಗರದಲ್ಲಿ 2019ರ ಡಿ.19ರಂದು ನಡೆದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.6ರಂದು ಬೆಳಗ್ಗೆ 11 ಗಂಟೆಗೆ ಮಿನಿವಿಧಾನಸೌಧದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಾಕ್ಷ/ಹೇಳಿಕೆ ನೀಡಲು ಅಂತಿಮ ಅವಕಾಶ ನೀಡಲಾಗಿದೆ.
ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿ ಹೇಳಿಕೆ ನೀಡಬಹುದು. ಅಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಹೇಳಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಯೂ ಆದ ಮ್ಯಾಜಿಸ್ಟೀರಿಯಲ್ ತನಿಖಾಧಿಕಾರಿ ಜಿ.ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.