ಫೆ. 7-16: ಕಾಜೂರು ಉರೂಸ್

Update: 2020-02-03 17:01 GMT

ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕಾಜೂರು ದರ್ಗಾ ಶರೀಫ್‍ ಉರೂಸ್  ಫೆ. 7ರಿಂದ ಆರಂಭಗೊಂಡು ಫೆ. 16 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಚಾರ ತಿಳಿಸಿದರು. ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಮತ್ತು ದ.ಕ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ ಎಂದರು.

ಫೆ. 7ರಂದು ಉರೂಸ್ ಸಮಾರಂಭದ ಉದ್ಘಾಟನೆಯನ್ನು ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಯ್ಯಿದ್ ಸಾದಾತ್ ತಂಙಳ್ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಯ್ಯಿದ್ ಕೂರತ್ ತಂಙಳ್ ಅಧ್ಯಕ್ಷತೆ ವಹಿಸಿ ದುಆ ಆಶೀರ್ವಚನ ನೀಡಲಿದ್ದಾರೆ. ಸಮಾರಂಭದಲ್ಲಿ ಸಯ್ಯಿದ್ ಕಿಲ್ಲೂರು ತಂಙಳ್, ಅಬ್ದುಲ್ ಹಮೀದ್ ಫೈಝಿ ಸಹಿತ ಪ್ರಮುಖ ಗಣ್ಯರುಗಳು ಭಾಗವಹಿಸಲಿದ್ದಾರೆ. ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ ಸಂದೇಶ ಭಾಷಣ ಮಾಡಲಿದ್ದಾರೆ.  ಈ ಸಮಾರಂಭದಲ್ಲಿ ತಾಲೂಕಿನ ಎಲ್ಲ ಮಸೀದಿಗಳ ಅಧ್ಯಕ್ಷರು, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ, ಉರೂಸ್ ಪ್ರಯುಕ್ತ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.

ಗೋಷ್ಟಿಯಲ್ಲಿ ಕೆ. ಮುಹಮ್ಮದ್ ಕಿಲ್ಲೂರು, ಉರೂಸ್ ಸಮಿತಿ ಉಪಾಧ್ಯಕ್ಷ ಜೆ.ಎಚ್ ಅಬೂಬಕರ್ ಸಿದ್ದೀಕ್, ಉರೂಸ್ ಸಮಿತಿ ಪ್ರ. ಕಾರ್ಯದರ್ಶಿ  ಕಾಸಿಂ ಮಲ್ಲಿಗೆಮನೆ ಕಿಲ್ಲೂರು, ಉರೂಸ್ ಸಮಿತಿ ಕಾರ್ಯದರ್ಶಿ, ಮುಹಮ್ಮದ್ ಕಮಾಲ್, ಉರೂಸ್ ಸಮಿತಿ ಕೋಶಾಧಿಕಾರಿ ಹಾಗೂ ಜತೆಕಾರ್ಯದರ್ಶಿ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News