ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Update: 2020-02-03 17:17 GMT

ಬೆಂಗಳೂರು, ಫೆ.3 : ರಾಜ್ಯದ ಕಂದಾಯ ಇಲಾಖೆಯ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿನ 59 ಹುದ್ದೆಗಳಿದ್ದು, ಅರ್ಜಿ ಸಲ್ಲಿಕೆಗೆ ಫೆ.21ರಂದು ಕೊನೆಯ ದಿನಾಂಕವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿರುವ 19 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಫೆ.29 ರಂದು ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ, ಎಸ್ಸಿ-ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ಉಳಿದಂತೆ ಅರ್ಜಿ ಶುಲ್ಕವನ್ನು ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ 100 ಹಾಗೂ ಇತರೆ ಅಭ್ಯರ್ಥಿಗಳಿಗೆ 200 ನಿಗದಿ ಮಾಡಲಾಗಿದೆ.

ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆಗೆ ಕರೆಯಲಾಗುವುದು. ಅರ್ಜಿಯನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗದ ಅಭ್ಯರ್ಥಿಗಳು ವೆಬ್‌ಸೈಟ್ http://chitradurga-va.kar.nic.in ಅನ್ನು ಹಾಗೂ ದಾವಣಗೆರೆ ಅಭ್ಯರ್ಥಿಗಳು ವೆಬ್‌ಸೈಟ್ https://davanagere.nic.in/en/notice_category/recruitment/ ಅನ್ನು ನೋಡಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News