×
Ad

ಸಿಎಎ, ಎನ್ ಆರ್ ಸಿ ವಿರೋಧಿಸಿ ಪ್ರತಿಭಟನೆ: ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಖುರೈಶಿ ವಿರುದ್ಧ ಪ್ರಕರಣ ದಾಖಲು

Update: 2020-02-04 11:49 IST

ಹೊಸದಿಲ್ಲಿ, ಫೆ.4: ಸಿಎಎ  ಮತ್ತು ಎನ್ ಆರ್ ಸಿ ವಿರುದ್ಧ  ಲಕ್ನೋದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಝೀಝ್ ಖುರೈಸಿ ಸೇರಿದಂತೆ ಹಲವರ ವಿರುದ್ಧ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಫೆ.2ರಂದು ಲಕ್ನೋದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಘಟಕರು ಸಂಬಂಧಪಟ್ಟವರಿಂದ ಅನುಮತಿ ಪಡೆದಿರಲಿಲ್ಲ. ಈ ಕಾರಣಕ್ಕಾಗಿ ಮಾಜಿ ರಾಜ್ಯಪಾಲರು ಮತ್ತು ಇತರರ ವಿರುದ್ಧ ಗೊಮ್ತಿ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಖುರೈಸ್  ಅವರು ಮೋಂಬತ್ತಿ ಮೆರವಣಿಗೆಯ ಓರ್ವ ನಾಯಕ ಆಗಿದ್ದಾರೆ ಎಂದು ಎಫ್ ಐಆರ್ ನಲ್ಲಿ ನಮೂದಿಸಲಾಗಿದೆ.

ಜ.30ರಂದು ಖುರೈಸಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು  'ಕಮ್ಯುನಲ್' ಎಂದು ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News