×
Ad

ಮಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರ ಧರಣಿ

Update: 2020-02-04 13:49 IST

ಮಂಗಳೂರು, ಫೆ.4: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಬಿಸಿಯೂಟ ನೌಕರರು ಮಂಗಳೂರಿನಲ್ಲಿ ಇಂದು ಧರಣಿ ನಡೆಸಿದರು.

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಒತ್ತಾಯಿಸಿ, ಬಿಸಿಯೂಟ ನೌಕರರನ್ನು ಡಿ ಗ್ರೂಪ್ ನೌಕರರು ಎಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಈ ಧರಣಿ ಹಮ್ಮಿಕೊಳ್ಳಲಾಗಿತ್ತು..

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ( ಸಿಐಟಿಯು) ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ತಡೆಯೊಡ್ಡಿದ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News