ಕೇರಳದಲ್ಲಿ ಲವ್ ಜಿಹಾದ್ ನಡೆದಿಲ್ಲ: ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

Update: 2020-02-04 08:58 GMT

ಹೊಸದಿಲ್ಲಿ: ಕೇರಳದಿಂದ ಯಾವುದೇ ಲವ್ ಜಿಹಾದ್ ಪ್ರಕರಣ ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಲವ್ ಜಿಹಾದ್ ಸಂಬಂಧ ಕೇರಳ ಹೈಕೋರ್ಟ್‍ನ ಅಭಿಪ್ರಾಯದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅರಿವು ಇದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ.

ಗೃಹಖಾತೆ ರಾಜ್ಯ ಸಚಿವರು ಕೇರಳದ ಕಾಂಗ್ರೆಸ್ ಮುಖಂಡ ಬೆನ್ನಿ ಬೆಹನಾನ್ ಅವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ರಾಜ್ಯದಿಂದ ಯಾವುದೇ ಲವ್‍ಜಿಹಾದ್ ಪ್ರಕರಣಗಳನ್ನು ಕೇಂದ್ರ ಏಜೆನ್ಸಿಗಳು ವರದಿ ಮಾಡಿವೆಯೇ ಎಂದು ಅವರು ಪ್ರಶ್ನಿಸಿದ್ದರು.

ಕಾನೂನಿನ ವ್ಯಾಪ್ತಿಯಲ್ಲಿ ಎಲ್ಲೂ ಲವ್ ಜಿಹಾದ್ ಎನ್ನುವುದನ್ನು ವ್ಯಾಖ್ಯಾನಿಸಿಲ್ಲ. ಇಂಥ ಯಾವುದೇ ಪ್ರಕರಣಗಳನ್ನು ಕೇಂದ್ರೀಯ ಏಜೆನ್ಸಿಗಳು ವರದಿ ಮಾಡಿಲ್ಲ ಎಂದು ಗೃಹಖಾತೆ ರಾಜ್ಯಸಚಿವ ಜಿ.ಕಿಶನ್ ರೆಡ್ಡಿ ಸ್ಪಷ್ಟಪಡಿಸಿದರು.

"ಸಂವಿಧಾನದ 25ನೇ ವಿಧಿ ಅನ್ವಯ ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಅನುಸಾರವಾಗಿ ಯಾವುದೇ ಧರ್ಮವನ್ನು ಆಚರಿಸಲು ಅವಕಾಶವಿದೆ. ಕೇರಳ ಹೈಕೋರ್ಟ್ ಸೇರಿದಂತೆ ವಿವಿಧ ನ್ಯಾಯಾಲಯಗಳು ಈ ನಿರ್ಧಾರವನ್ನು ಎತ್ತಿಹಿಡಿದಿವೆ" ಎಂದು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News