ಉಡುಪಿ: ಫೆ. 6ಕ್ಕೆ ಸಿಎಎ, ಎನ್‌ಆರ್‌ಸಿ ಕುರಿತು ‘ಪೌರತ್ವ ಸಂರಕ್ಷಣಾ ವಿಚಾರ ಸಂಕಿರಣ’
ಉಡುಪಿ, ಫೆ.4: ಉಡುಪಿ ಜಿಲ್ಲಾ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ವತಿಯಿಂದ ಕೇಂದ್ರ ಸರಕಾರದ ಸಂವಿಧಾನ ಹಾಗೂ ಜನವಿರೋಧಿ ನೀತಿಗಳಾದ ಸಿಎಎ, ಎನ್‌ಆರ್‌ಸಿ-ಎನ್‌ಪಿಆರ್ ಕುರಿತು ಫೆ.6ರಂದು ಬೆಳಗ್ಗೆ 9.45ಕ್ಕೆ ಪುರಭವನದಲ್ಲಿ ‘ಪೌರತ್ವ ಸಂರಕ್ಷಣಾ ವಿಚಾರ ಸಂಕಿರಣ’ವನ್ನು ಏರ್ಪಡಿಸಲಾಗಿದೆ.
ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಸಂವಿಧಾನ ವಿರೋಧಿ ಕಾಯ್ದೆಗಳಾದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ಗಳಿಂದ ಉದ್ಭವಿಸ ಬಹುದಾದ ದುಷ್ಟರಿಣಾಮಗಳನ್ನು ಜನರಿಗೆ ತಿಳಿಸುವ ಹಾಗೂ ನಮ್ಮೆಲ್ಲರ ಪೌರತ್ವವನ್ನು ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ವನ್ನು ಆಜಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.
ವಿಚಾರ ಸಂಕಿರಣದಲ್ಲಿ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಯ ರಾಷ್ಟ್ರೀಯ ಅಧ್ಯಕ್ಷೆ ಮೀನಾಕ್ಷಿ ನಟರಾಜನ್, ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್, ಕೆಪಿಸಿಸಿ ವಕ್ತಾರರಾದ ಉಗ್ರಪ್ಪ, ಖ್ಯಾತ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಶಿವಸುಂದರ್ ಭಾಗವಹಿಸಲಿದ್ದಾರೆ.
ಈ ವಿಚಾರ ಸಂಕಿರಣದಲ್ಲಿ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್, ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುನಾಥನ್, ಬಿ.ಎಂ.ಸಂದೀಪ್, ಸಂಘಟನೆಯ ರಾಜ್ಯ ಸಂಚಾಲಕ ರಂಗಸ್ವಾಮಿ, ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ವಿನಯಕುಮಾರ್ ಸೊರಕೆ ಹಾಗೂ ಇತರರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ನಾಯಕರು, ಮಾಜಿ ಶಾಸಕರು, ಸದಸ್ಯರು, ಜಿಲ್ಲಾ ಮತು ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್ ಹಾಗೂ ಗೌರವ ಸಲಹೆಗಾರರಾದ ವೆರೋನಿಕಾ ಕರ್ನೇಲಿಯೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.