ಫೆ.8ರಂದು ಕಟಪಾಡಿಯಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

Update: 2020-02-04 15:17 GMT

ಕಟಪಾಡಿ, ಫೆ.4: ಡಾ.ಬಿ.ಆರ್. ಮತ್ತು ಸಿ.ಆರ್. ಶೆಟ್ಟಿ ಫೌಂಡೇಶನ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಾಹೆ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಮೂಡಬೆಟ್ಟು ಹಾಗೂ ರೋಟರಿ ಕಟಪಾಡಿ ಇವರ ಸಹಯೋಗ ದೊಂದಿಗೆ ಪ್ರೇರಣಾ ಟ್ರಸ್ಟ್ ಕಟಪಾಡಿ ಆಶ್ರಯದಲ್ಲಿ ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ಸ್ಥಳೀಯ ಎಸ್ ವಿ ಎಸ್ ಪ್ರೌಢ ಶಾಲಾ ಸಭಾಂಗಣದಲ್ಲಿ ಫೆ.8ರಂದು ಬೆಳಗ್ಗೆ 9 ರಿಂದ ಅಪರಾಹ್ನ 3:30ರವರೆಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ನಡೆಯಲಿದೆ.

ದೇಹದ ವಿವಿಧ ಭಾಗಗಳಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಬಗ್ಗೆ ತಪಾಸಣೆ, ಸೂಕ್ತ ಮಾಹಿತಿ ಹಾಗೂ ಚಿಕಿತ್ಸೆಗಳ ಮಾರ್ಗದರ್ಶನವನ್ನು ನೀಡಲಾಗುತ್ತದೆ. ಸೀಮಿತ ಸಂಖ್ಯೆಯಲ್ಲಿ ಮಾತ್ರ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿರುವುದರಿಂದ ಬೆಳಗ್ಗೆ 11 ಗಂಟೆಯ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ.

ಕಟಪಾಡಿ ಆಸುಪಾಸಿನ ನಾಗರಿಕರು ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕಟಪಾಡಿಯ ಪ್ರೇರಣಾ ಟ್ರಸ್ಟ್ ಹಾಗೂ ರೋಟರಿ ಕಟಪಾಡಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News