×
Ad

ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ: ಪಡುಬಿದ್ರೆ ಅಧ್ಯಕ್ಷರಾಗಿ ವೈ ಸುಧೀರ್ ಕುಮಾರ್ ಆಯ್ಕೆ

Update: 2020-02-04 22:28 IST

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಯಿಕ ಸೊಸೈಟಿಯ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಪುನರಾಯ್ಕೆಗೊಂಡಿದ್ದು, ಮಂಗಳವಾರ ಪದಗ್ರಹಣ ಸಮಾರಂಭ ನಡೆಯಿತು.

ಪದಾಧಿಕಾರಿಗಳ ಅಯ್ಕೆಗಾಗಿ ಫೆ. 4ರಂದು ಸೊಸೈಟಿಯ ಪ್ರಧಾನ ಕಾರ್ಯಾಲಯದಲ್ಲಿ ನಡೆದ ಪ್ರಕ್ರಿಯೆಯಲ್ಲಿ ಇಬ್ಬರೂ ಅವಿರೋಧವಾಗಿ ಚುನಾಯಿತರಾದರು. ಅರುಣ್ ಕುಮಾರ್ ಎಸ್.ವಿ. ಸಹಕಾರ ಸಂಘಗಳ ಅಭಿವೃದ್ದಿ ಅಧಿಕಾರಿ ಕಾರ್ಕಳ ಇವರು ರಿಟರ್ನಿಂಗ್ ಅಧಿಕಾರಿ ಆಗಿದ್ದರು. ಮಂಗಳವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೈ. ಸುಧೀರ್ ಕುಮಾರ್ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ನಿರ್ದೇಶಕರಾದ ರಸೂಲ್ ವೈ. ಜಿ, ಗಿರೀಶ್ ಫಲಿಮಾರ್, ಶಿವರಾಮ ಎನ್. ಶೆಟ್ಟಿ, ವಾಸುದೇವ ದೇವಾಡಿಗ, ರಾಜಾರಾಮ್ ರಾವ್, ಮಾಧವ ಆಚಾರ್ಯ, ಯಶವಂತ್, ಸ್ಟೇನಿ ಕ್ವಾಡ್ರಸ್, ಸುಚರಿತ ಎಲ್. ಅಮೀನ್, ಕುಸುಮಾ ಎಮ್. ಕರ್ಕೇರ, ಕಾಂಚನ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಬಾಲಕೃಷ್ಣ ರಾವ್,  ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ನಿಶ್ಮಿತಾ ಪಿ.ಎಚ್., ಸಿಬ್ಬಂದಿ ವೃಂದ ಹಾಗೂ ಸೊಸೈಟಿಯ ಸದಸ್ಯರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆ ಬಳಿಕ ಮಾತನಾಡಿದ ವೈ ಸುಧೀರ್ ಕುಮಾರ್, ಮುಂದಿನ 5 ವರ್ಷಗಳ ಅವಧಿಗೆ ಸೊಸೈಟಿಯ ವ್ಯಾಪ್ತಿಗೆ ಸೇರಿರುವ ಎಲ್ಲಾ ಗ್ರಾಮದ ಜನರು  ಸೊಸೈಟಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವ್ಯವಹರಿಸುವ ಮೂಲಕ ಸೊಸೈಟಿಯು ಜಿಲ್ಲೆಯಲ್ಲಿ ಉತ್ತಮ ಸಂಸ್ಥೆಯಾಗಿ ಬೆಳೆಸುವಲ್ಲಿ ಸಹಕಾರ ಕೋರಿದರು.

ಮುಂದಿನ ದಿನಗಳಲ್ಲಿ ನಮ್ಮ ಆಡಳಿತ ಮಂಡಳಿಯು ಈ ಸಂಸ್ಥೆಯ ಬೆಳವಣಿಗೆಯಲ್ಲಿ ಸರ್ವ ರೀತಿಯಲ್ಲಿ ಸಿಬ್ಬಂದಿ ವೃಂದದೊಂದಿಗೆ ಕೈ ಜೋಡಿಸುವುದಾಗಿ ತಿಳಿಸಿದರು ಹಾಗೂ ಸಹಕಾರಿ ಇಲಾಖೆಯ ಎಲ್ಲಾ ಅಧಿಕಾರಿ ವರ್ಗದವರು ತಮಗೆ ಮಾರ್ಗದರ್ಶನ ನೀಡಿ ಸಂಸ್ಥೆಯನ್ನು ಬೇಳೆಸುವಲ್ಲಿ ಸಹಕಾರ ನೀಡಬೇಕೆಂದು ವಿನಂತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News