ಆರ್‌ಟಿಐ ಆನ್‌ಲೈನ್ ಸೇವೆಗೆ ಮುಖ್ಯಮಂತ್ರಿ ಚಾಲನೆ
Update: 2020-02-04 23:06 IST
ಬೆಂಗಳೂರು, ಫೆ.4: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಅಂಕಿ ಅಂಶಗಳ ನೋಟ ಪುಸ್ತಕ ಬಿಡುಗಡೆ ಮಾಡಿ, ಆರ್‌ಟಿಐ ಆನ್‌ಲೈನ್ ಸೇವೆ ಹಾಗೂ ಸಕಾಲ ಮಿಷನ್ ಯೋಜನೆಯಡಿ ಜನಸೇವಕ ಯೋಜನೆ ವಿಸ್ತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜನಸ್ನೇಹಿ ಸಹಾಯವಾಣಿ ಹಾಗೂ ಕಾರ್ಮಿಕ ಇಲಾಖೆಯ ಆಶಾದೀಪ ಯೋಜನೆ ಹಾಗೂ ಕಾರ್ಮಿಕ ಸಹಾಯವಾಣಿಯನ್ನು ಮುಖ್ಯಮಂತ್ರಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕ ಬಿ.ಜೆ.ಪುಟ್ಟಸ್ವಾಮಿ, ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.