ಅನಂತಕುಮಾರ್ ಹೆಗಡೆಯಿಂದ ಸಂವಿಧಾನಕ್ಕೆ ಅವಮಾನ: ಆರ್.ವಿ.ದೇಶಪಾಂಡೆ

Update: 2020-02-04 17:40 GMT

ಬೆಂಗಳೂರು, ಫೆ.4: ಸಂಸದ ಅನಂತಕುಮಾರ್ ಹೆಗಡೆ ಗಾಂಧೀಜಿಯವರ ಹೋರಾಟವನ್ನು ಅವಮಾನ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ಮಂಗಳವಾರ ಶಾಸಕರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ನಾಗರಿಕರು ಇದನ್ನು ಮರೆಯಲು ಸಾಧ್ಯವಿಲ್ಲ. ಮತ ನೀಡಿದ ಉತ್ತರಕನ್ನಡ ಜನರಿಗೂ ಅವಮಾನ ಮಾಡಿದ್ದಾರೆ. ಕೂಡಲೇ ಅನಂತಕುಮಾರ್ ಹೆಗಡೆ ಜನತೆಯ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಷ್ಟ್ರೀಯ ನಾಯಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಜೊತೆಗೆ ಲೋಕಸಭಾ ಸ್ಪೀಕರ್ ಅವರು ಅನಂತಕುಮಾರ್ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೇಶಪಾಂಡೆ ಒತ್ತಾಯಿಸಿದರು. ರಾಜ್ಯದಲ್ಲಿ ಹಣಕಾಸಿನ ಪರಸ್ಥಿತಿ ಗಂಭೀರವಾಗಿದೆ. ಬೆಳೆ ಪರಿಹಾರ ಸಿಕ್ಕಿಲ್ಲ, ಇನ್ನೂ ಕೆಲವು ಜನ ನಿರಾಶ್ರಿತರ ಶಿಬಿರದಲ್ಲಿದ್ದಾರೆ. ಸರಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಪ್ರತಿಕ್ರಿಯಿಸಿದ ದೇಶಪಾಂಡೆ, ನಾನು ಈ ಹುದ್ದೆಯ ರೇಸ್‌ನಲ್ಲಿ ಇಲ್ಲ, ದಿಲ್ಲಿ ಚುನಾವಣೆಯ ನಂತರ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡುವ ಸಾಧ್ಯತೆಗಳಿವೆ. ಜೊತೆಗೆ ಸಿಎಲ್ಪಿ ಹಾಗೂ ವಿಪಕ್ಷ ನಾಯಕ ಸ್ಥಾನ ಪ್ರತ್ಯೇಕ ಮಾಡುವ ಸಂಪ್ರದಾಯ ನಮ್ಮ ರಾಜ್ಯದಲ್ಲಿ ಇಲ್ಲ. ಸಿದ್ದರಾಮಯ್ಯ ಅವರೇ ಎರಡು ಸ್ಥಾನಗಳಲ್ಲಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News