ಕೊರೊನಾ ವೈರಸ್ ಬಗ್ಗೆ ಭಯ ಬೇಡ, ಎಚ್ಚವಿರಲಿ: ಆರೋಗ್ಯ ಇಲಾಖೆ

Update: 2020-02-04 18:04 GMT

ರಾಮನಗರ ಫೆ.4: ತೀವ್ರ ಜ್ವರದ ಪ್ರಾರಂಭ ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಬೇದಿ ಕೊರೋನ ಸೋಂಕಿತ ಲಕ್ಷಣವಾಗಿರುತ್ತದೆ. ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೆ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ ಈ ವೈರಸ್‌ಗಳು ಹರಡುತ್ತದೆ. ವೈಯಕ್ತಿಕ ಸ್ವಚ್ಛತೆ ಇಲ್ಲದೆ, ಮೂಗು, ಬಾಯಿ ಹೇಗೆಂದರೆ ಹಾಗೆ ಮುಟ್ಟುವುದರಿಂದಲೂ ಸೋಂಕು ಹರಡಬಹುದು.

ಲಕ್ಷಣಗಳು ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೇಪನ ಮತ್ತು ರಕ್ತದ ಮಾದರಿಯನ್ನು ಪ್ರಯೋಗ ಶಾಲೆಯಲ್ಲಿ ಪರೀಕ್ಷೆಗೆ ಒಳಪಡಿಸಿ, ಸೋಂಕನ್ನು, ದೃಢಪಡಿಸಲಾಗುತ್ತದೆ. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಚೆನ್ನಾಗಿ ಆಗಾಗ ತೊಳೆದುಕೊಳ್ಳುವ ಮೂಲಕ ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಿ. ಅನಾರೋಗ್ಯದಿಂದಿರುವ ಅಥವಾ ಕೆಮ್ಮು ಮತ್ತು ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬೇಡಿ.

ಪ್ರಾಣಿಗಳ ನೇರ ಸಂಪರ್ಕವನ್ನು ಹಾಗೂ ಬೇಯಿಸದ ಕಚ್ಚಾ ಮಾಂಸ ಸೇವನೆಯನ್ನು ಮಾಡಬೇಡಿ. ಕೊರೊನಾ ವೈರಸ್ ಬಗ್ಗೆ ಭಯ ಬೇಡ, ಎಚ್ಚವಿರಲಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News