ಮದುವೆಯ ಆಮಿಷವೊಡ್ಡಿ ಅತ್ಯಾಚಾರ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ

Update: 2020-02-04 18:07 GMT

ಹಾವೇರಿ, ಫೆ.4: ಮದುವೆಯ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಹಾವೇರಿ ಜಿಲ್ಲೆಯ ಒಂದನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.

ಮಂಜಪ್ಪ ಭೋಜಪ್ಪ ಚೌಡಣ್ಣನವರ್ ಎಂಬ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ನ್ಯಾಯಾಧೀಶ ಕಿರಣ ಕಿಣಿ ಅವರು ತೀರ್ಪು ನೀಡಿದ್ದಾರೆ. ಆರೋಪಿಯು ಹಂಸಭಾವಿ ಠಾಣಾ ವ್ಯಾಪ್ತಿಯ ಲಿಂಗಾಪುರ ಗ್ರಾಮದ ನಿವಾಸಿಯಾಗಿದ್ದು, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ಬಲವಂತವಾಗಿ ಅತ್ಯಾಚಾರ ಮಾಡಿ ಮೋಸ ಮಾಡಿದ್ದನು. ಅಲ್ಲದೆ, ಯುವತಿಯ ಜಾತಿ ನಿಂದನೆ ಮಾಡಿದ್ದ ಎನ್ನಲಾಗಿದೆ.

ಇದರಿಂದ ನೊಂದ ಯುವತಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ತನಿಖೆ ನಡೆಸಿದ ಠಾಣೆಯ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಅಪರಾಧ ಸಾಬೀತಾಗಿದ್ದು, 10 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ, ದಂಡ ವಿಧಿಸಿ ತೀರ್ಪು ನೀಡಿದೆ.

ಸರಕಾರದ ಪರವಾಗಿ ಸಿದ್ದಾರೂಢ ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News