ಮೊದಲ ಏಕದಿನ: ನ್ಯೂಝಿಲ್ಯಾಂಡ್ ಗೆಲುವಿಗೆ 348 ರನ್ ಗುರಿ

Update: 2020-02-05 06:22 GMT

ಹ್ಯಾಮಿಲ್ಟನ್, ಫೆ.5: ಶ್ರೇಯಸ್ ಅಯ್ಯರ್ ಶತಕ(103),ಕೆಎಲ್ ರಾಹುಲ್(ಔಟಾಗದೆ 88)ಹಾಗೂ ವಿರಾಟ್‌ಕೊಹ್ಲಿ (51)ಅರ್ಧಶತಕಗಳ ಕೊಡುಗೆ ನೆರವಿನಿಂದ ಭಾರತ ತಂಡ ನ್ಯೂಝಿಲ್ಯಾಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆ ಹಾಕಿದೆ.

ಟಾಸ್ ಜಯಿಸಿದ ನ್ಯೂಝಿಲ್ಯಾಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.

ಮೊದಲು ಬ್ಯಾಟಿಂಗ್‌ನ ಅವಕಾಶ ಪಡೆದ ಭಾರತ ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿ ನ್ಯೂಝಿಲ್ಯಾಂಡ್ ಗೆಲುವಿಗೆ ಕಠಿಣ ಗುರಿ ನೀಡಿದೆ.

ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಶ್ರೇಯಸ್ ಅಯ್ಯರ್(103, 107 ಎಸೆತ, 11 ಬೌಂಡರಿ,1 ಸಿಕ್ಸರ್‌) 101 ಎಸೆತಗಳಲ್ಲಿ ಚೊಚ್ಚಲ ಶತಕ ಪೂರೈಸಿದರು. 64 ಎಸೆತಗಳಲ್ಲಿ 3 ಬೌಂಡರಿ ಹಾಗೂ ಆರು ಸಿಕ್ಸರ್‌ಗಳ ಸಹಿತ ಔಟಾಗದೆ 88 ರನ್ ಗಳಿಸಿದ ರಾಹುಲ್ ತಂಡ ಉತ್ತಮ ಮೊತ್ತ ಕಲೆಹಾಕಲು ನೆರವಾದರು.

   ಇದಕ್ಕೂ ಮೊದಲು ಚೊಚ್ಚಲ ಏಕದಿನ ಪಂದ್ಯ ಆಡಿದ ಪೃಥ್ವಿ ಶಾ ಹಾಗೂ ಮಾಯಾಂಕ್ ಅಗರ್ವಾಲ್ ಇನಿಂಗ್ಸ್ ಆರಂಭಿಸುವ ಅಪೂರ್ವ ಅವಕಾಶ ಪಡೆದರು. ಈ ಇಬ್ಬರು ಮೊದಲ ವಿಕೆಟ್‌ಗೆ 50 ರನ್ ಸೇರಿಸಿದರು. ಶಾ 21 ಎಸೆತಗಳಲ್ಲಿ 20 ರನ್ ಗಳಿಸಿ ಔಟಾದರು. ಮಾಯಾಂಕ್ 31 ಎಸೆತಗಳಲ್ಲಿ ಆರು ಸಿಕ್ಸರ್‌ಗಳಿರುವ 32 ರನ್ ಗಳಿಸಿದರು.

ನಾಯಕ ವಿರಾಟ್ ಕೊಹ್ಲಿ ಅರ್ಧಶತಕ(51, 63 ಎಸೆತ, 6 ಬೌಂಡರಿ)ಗಳಿಸಿ ಇಶ್ ಸೋಧಿಗೆ ಕ್ಲೀನ್‌ಬೌಲ್ಡಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News