×
Ad

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಖ್ಯಮಂತ್ರಿಯಿಂದ ಉದ್ಘಾಟನೆ

Update: 2020-02-05 15:27 IST

ಕಲಬುರಗಿ, ಫೆ.5: ಗುಲಬರ್ಗಾ ವಿಶ್ವವಿದ್ಯಾನಿಲಯ ಆವರಣದಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ನಾಳೆ ಬೀದರ್ ವಿಮಾನ ನಿಲ್ದಾಣ ಸರ್ವಜನಿಕರಿಗೆ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದ್ದು, ಕಲ್ಯಾಣ ಕರ್ನಾಟ ಭಾಗದ ಅಭಿವೃದ್ಧಿಗೆ ಸರಕಾರ ಬದ್ಧವಿದೆ ಎಂದರು.

ಸ್ವಾಗತ ಭಾಷಣ ಮಾಡಿದ ಉಪಮುಖ್ಯಮಂತ್ರಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೊಂವಿದ್ ಕಾರಜೋಳ, 2500 ವರ್ಷಗಳ ಐತಿಹ್ಯ ವಿರುವ ಕನ್ನಡ ಭಾಷೆ ಶ್ರೀಮಂತವಾಗಿದ್ದು, ಗಟ್ಟಿಯಾಗಿದೆ‌. 12ನೇ ಶತಮಾನದಲ್ಲಿ ಶರಣರು ಕನ್ನಡ ಭಾಷೆ  ಬೆಳೆಸಲು ಶ್ರಮಿಸಿದ್ದಾರೆ‌. ನಾವು ಇಂದು ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ ಸಂಗತಿ. ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ಕನ್ನಡಿಗರು ಕನ್ನಡ ಭಾಷೆಯಲ್ಲೇ ಉತ್ತರಿಸಬೇಕು ಎಂದರು. 

ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸಮ್ಮೇಳನಾಧ್ಯಕ್ಷ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಸಂಸದ ಡಾ.ಉಮೇಶ ಜಾಧವ್, ಕಸಾಪ ಜಿಲ್ಲಾಧ್ಯಕ್ಷ ವೀರೇಂದ್ರ ಸಿಂಪಿ, ಜಿಲ್ಲಾಧಿಕಾರಿ ಶರತ್ ಬಿ., ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರು, ಶಾಸಕಿ ಕನೀಜ್ ಫಾತಿಮಾ, ಶಾಸಕ ದತ್ತಾತ್ರೇಯ ಪಾಟೀಲ್ ಸೇರಿಂದ ಜಿಲ್ಲೆಯ ತಾಲೂಕು ಮತಕ್ಷೇತ್ರ ಶಾಸಕರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕಲಬುರಗಿಯಲ್ಲಿ ನಡೆಯುತ್ತಿರುವ 4ನೇ ಸಮ್ಮೇಳನ ಜಾತ್ರ ಮತ್ತು ಮೆರವಣಿಗೆ ಹಬ್ಬದ ವಾತವರಣ ಸೃಷ್ಟಿಸಿದೆ. ಸಮ್ಮೇಳನಕ್ಕೆ ಸುಮಾರು ಎರಡು ಲಕ್ಷ ಜನರು ಸೇರುವುದು ಕಂಡುಬಂದಿದು, ಸಮ್ಮೇಳನ ಆವರಣದಲ್ಲಿ ಬೀದಿ ವ್ಯಾಪಾರಿಗಳಿಗೂ ತಮ್ಮ ಮಳಿಗೆಗೆ ಅವಕಾಶ ಮಾಡಿ ಕುಡುವ ಮೂಲಕ ಸಮ್ಮೇಳನ ಜಾತ್ರೆಗೆ ಅವಕಾಶ ನೀಡಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News