×
Ad

ರಾಷ್ಟ್ರಪತಿ, ಪ್ರಧಾನಿ ಸಹಿತ ಗಣ್ಯಾತಿಗಣ್ಯರು ಭಾಗವಹಿಸಿದ ಮುಂಡನ ಕಾರ್ಯಕ್ರಮ!

Update: 2020-02-05 18:38 IST
File Photo

ಹೊಸದಿಲ್ಲಿ: ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯ ಕೇಶಮುಂಡನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಮಂಗಳವಾರ ಮಾಡಿದ ಟ್ವೀಟ್ ಶಕ್ತಿಕೇಂದ್ರದಲ್ಲಿ ಸಂಚಲನಕ್ಕೆ ಕಾರಣವಾಗಿತ್ತು.

ಹಿರಿಯ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯ ಅಳಿಯ ಹಾಗೂ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿಯ ಪುತ್ರಿಯ ಮುಂಡನ ಕಾರ್ಯಕ್ರಮ ನ್ಯಾಯಮೂರ್ತಿಗಳ ಮನೆಯಲ್ಲಿ ನಡೆಯುತ್ತಿದೆ ಎಂದು ಪ್ರಶಾಂತ್ ಭೂಷಣ್ ವಿವರಿಸಿದ್ದರು.

ವಾಣಿಜ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ದಿವಾಕರನಾಥ್ ಮಿಶ್ರಾ ಈ ಅದ್ದೂರಿ ಸಮಾರಂಭ ಆಯೋಜಿಸಿದ್ದ ವ್ಯಕ್ತಿ ಎನ್ನುವುದು ಇದೀಗ ಬಹಿರಂಗವಾಗಿದೆ. ಇವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರ ಅಳಿಯ. 2000ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಇವರು ಅಸ್ಸಾಂ ಮೇಘಾಲಯ ಕೇಡರ್ ಅಧಿಕಾರಿ.

ಪೆಟ್ರೋಲಿಯಂ ಸಚಿವಾಲಯದಲ್ಲಿ ಈ ಮೊದಲು ಸೇವೆ ಸಲ್ಲಿಸಿದ್ದ ಇವರು ಬಳಿಕ ವಾಣಿಜ್ಯ ಇಲಾಖೆಗೆ ವರ್ಗಾವಣೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News