ನಿರ್ಭಯಾ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿಯ ಕ್ಷಮಾದಾನ ಅರ್ಜಿ ತಿರಸ್ಕೃತ
Update: 2020-02-05 21:16 IST
ಹೊಸದಿಲ್ಲಿ, ಫೆ.5: ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಿರಸ್ಕರಿಸಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಅತ್ಯಾಚಾರ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮುಖೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಅವರ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಅವರು ಈಗಾಗಲೇ ತಿರಸ್ಕರಿಸಿದ್ದಾರೆ.