ಫೆ. 6: ಮೈಕ್ರೋ ಫೈನಾನ್ಸ್ ವಿರುದ್ಧ ಪ್ರತಿಭಟನೆ
Update: 2020-02-05 21:36 IST
ಉಡುಪಿ, ಫೆ.5:ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ, ಋಣ ಮುಕ್ತ ಹೋರಾಟ ಸಮಿತಿ ಉಡುಪಿ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ, ಅಂಬೇಡ್ಕರ್ ಸೇನೆ, ಅಂಬೇಡ್ಕರ್ ಯುವ ಸೇನೆಗಳ ಸಂಯುಕ್ತ ಆಶ್ರಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ದಬ್ಬಾಳಿಕೆ, ದೌರ್ಜನ್ಯಗಳ ವಿರುದ್ಧ ಸಾಲಸಂತ್ರಸ್ತ ಮಹಿಳೆಯರಿಂದ ಬೃಹತ್ ಪ್ರತಿಭಟನೆ ಫೆ.6ರ ಬೆಳಗ್ಗೆ 9:30ಕ್ಕೆ ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಮಹಾತ್ಮಗಾಂಧಿ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಋಣಮುಕ್ತ ಹೋರಾಟ ಸಮಿತಿಯ ಜಿಲ್ಲಾದ್ಯಕ್ಷ ಮಂಜುನಾಥ ಬೈಲೂರು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿಭಟನಾ ಸಮಾವೇಶವನ್ನು ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷ ಪಿ.ಮೂರ್ತಿ ಉದ್ಘಾಟಿಸಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.