ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟ
Update: 2020-02-05 21:57 IST
ಮಂಗಳೂರು, ಫೆ.5: ಕರ್ನಾಟಕ ಸಾಹಿತ್ಯ ಅಕಾಡಮಿಯು ಕರ್ನಾಟಕ ಹಾಗೂ ಹೊರ ರಾಜ್ಯಗಳ ಕನ್ನಡ ಬರಹಗಾರರಿಗಾಗಿ ಮಾರ್ಚ್‌ನಲ್ಲಿ ಮೂರು ದಿನಗಳ ದಕ್ಷಿಣ ಭಾರತ ಮಟ್ಟದ ಕನ್ನಡ ಕಾವ್ಯ ಕಮ್ಮಟವನ್ನು ಕಾಸರಗೋಡಿನಲ್ಲಿ ಏರ್ಪಡಿಸಿದೆ.
20 ರಿಂದ 40 ವರ್ಷ ವಯಸ್ಸಿನ ಕನ್ನಡ ಕಾವ್ಯ ರಚನೆಯಲ್ಲಿ ತೊಡಗಿರುವ ದಕ್ಷಿಣ ಭಾರತ (ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ) ಭಾಗದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22211730, 22106460 ಹಾಗೂ ಕರ್ನಾಟಕ ಸಾಹಿತ್ಯ ಅಕಾಡಮಿ ವೆಬ್‌ಸೈಟ್: http://karnatakasahithyaacademy.orgನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಡಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.