ಪ್ರಚೋದನಾಕಾರಿ ಹೇಳಿಕೆ ಆರೋಪ: ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್‌ಗೆ ಪಿಐಎಲ್

Update: 2020-02-05 18:24 GMT

ಬೆಂಗಳೂರು, ಫೆ.5: ಸಿಎಎ ಪ್ರತಿಭಟನಾಕಾರರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವ ಸಿ.ಟಿ.ರವಿ ವಿರುದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಫೆಡರೇಶನ್ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿದೆ. 

ಪ್ರಕರಣ ಸಂಬಂಧ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ. ಡಿ.20ರಂದು ಸಿ.ಟಿ.ರವಿ ಅವರು ಸಿಎಎ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನಾಕಾರರ ವಿರುದ್ಧ ಕಿಡಿಕಾರಿದ್ದರು. ಗೋದ್ರಾ ಹತ್ಯಾಕಾಂಡ ಪ್ರಸ್ತಾಪಿಸಿ, ಗೋದ್ರಾ ರೈಲಿಗೆ ಬೆಂಕಿ ಹಚ್ಚಿದ ಬಳಿಕ ಏನಾಯಿತು ಎಂದು ಗೊತ್ತಿದೆ ಅಲ್ವ ಎಂದಿದ್ದರು. ಈ ಹೇಳಿಕೆ ವಿರುದ್ಧ ಡಿ.24ರಂದು ಸಿ.ಟಿ.ರವಿ ವಿರುದ್ಧ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಫೆಡರೇಶನ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಸಿ.ಟಿ.ರವಿ ಮಾತ್ರವಲ್ಲದೆ ಶಾಸಕ ಸುನೀಲ್‌ ಕುಮಾರ್, ಸೋಮಶೇಖರ್‌ರೆಡ್ಡಿ ಸಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇವರ ವಿರುದ್ಧವೂ ಕ್ರಮಕೈಗೊಳ್ಳುವಂತೆ ನಿರ್ದೇಶನ ಮಾಡುವಂತೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News