ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಸೆರೆ, 1.5 ಲಕ್ಷ ರೂ. ನಗದು ಜಪ್ತಿ

Update: 2020-02-06 12:51 GMT

ಬೆಂಗಳೂರು, ಫೆ.6: ಹಣ ಪಣವಾಗಿ ಕಟ್ಟಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು 1.5 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.

ಇಲ್ಲಿನ ಆರ್‌ಪಿಸಿ ಲೇಔಟ್‌ನ ಸುಭಾಷ್ ಶ್ಯಾಮ್ (44) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನದ ಬಿಕನೇರ್ ಮೂಲದ ಆರೋಪಿಯು ಆರ್‌ಪಿಸಿ ಲೇಔಟ್‌ನ ಬಾಡಿಗೆ ಮನೆ ಬಳಿ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುನ ಏಕದಿನ ಕ್ರಿಕೆಟ್ ಪಂದ್ಯಕ್ಕೆ ಮೊಬೈಲ್ ಆ್ಯಪ್ ಮೂಲಕ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದಾಗ ಆರೋಪ ಸಿಕ್ಕಿಬಿದ್ದಿದ್ದಾನೆ.

ಆರೋಪಿ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News