ಸಿಗದ ಸಚಿವ ಸ್ಥಾನ: ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ

Update: 2020-02-06 13:09 GMT

ಬೆಂಗಳೂರು, ಫೆ. 6: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸರಕಾರ ಸುಭದ್ರಗೊಳಿಸಿದವರಿಗೆ ಮಂತ್ರಿ ಸ್ಥಾನ ನೀಡಿರುವುದು ಸ್ವಾಗತಾರ್ಹ. ಆದರೆ, ನಾನು ಮಂತ್ರಿ ಆಗಬೇಕೆಂಬುದು ಚಿತ್ರದುರ್ಗ ಜನರ ಬಯಕೆಯಾಗಿತ್ತು ಎಂದು ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಸಚಿವ ಸಂಪುಟ ವಿಸ್ತರಣೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇನ್ನೂ ಏಳೆಂಟು ಜನರಿಗೆ ಮಂತ್ರಿ ಸ್ಥಾನ ನೀಡಿದರೆ ಒಳ್ಳೆಯದು. ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸಿಲ್ಲ. ಆದರೆ, ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸಚಿವ ಸಂಪುಟದಲ್ಲಿ ಬೆಂಗಳೂರು ಹಾಗೂ ಬೆಳಗಾವಿಗೆ ಅರ್ಧದಷ್ಟು ಪಾಲು ಸಿಕ್ಕಿದೆ. ಕಲಬುರ್ಗಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳನ್ನು ಕಡೆಗಣಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಮೂರು-ನಾಲ್ಕು ಬಾರಿ ಸಚಿವರಾದವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುವುದು ಸೂಕ್ತ. ಹೊಸಬರು, ಹಿರಿಯರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News