ಸಿಎಎ ಕಾಯ್ದೆ ಧರ್ಮಾಧಾರಿತ, ಸಂವಿಧಾನದ ಆಶಯಕ್ಕೆ ವಿರೋಧಿ: ಸಿನೆಮಾ ನಿರ್ದೇಶಕ ಬಿ.ಸುರೇಶ್

Update: 2020-02-07 06:31 GMT

ಕಲಬುರಗಿ, ಫೆ.7: ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಸಿಎಎ ಕಾಯ್ದೆ ಧರ್ಮಾಧಾರಿತವಾಗಿದೆ ಹಾಗೂ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ. ಇದನ್ನು ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ನಿಂತುಕೊಂಡು ಕನ್ನಡಿಗರ ಪರವಾಗಿ ಖಂಡಿಸುತ್ತೇನೆ ಎಂದು ಸಿನೆಮಾ ನಿರ್ದೇಶಕ ಬಿ.ಸುರೇಶ್ ಹೇಳಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನವಾದ ಶುಕ್ರವಾರ ಗೋಷ್ಟಿಯಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ನಡೆದ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಾಂಬ್ ಹಾಕುತ್ತೇವೆಂದು ಬೆದರಿಕೆ ಹಾಕಿದ ಆರೋಪಿಗಳನ್ನು ಪೊಲೀಸರು ಕೂಡಲೇ ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಕನ್ನಡಿಗರ ಅಸ್ಮಿತೆಗಳಲ್ಲಿ ಒಂದಾದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಾಂಬ್ ಹಾಕುತ್ತೇವೆ ಎಂದವರೇ ನಿಜವಾದ ಭಯೋತ್ಪಾದಕರು. ಅಂತವರನ್ನು ಬಂಧಿಸುವ ಮೂಲಕ ಕನ್ನಡಿಗರ ಜೀವವನ್ನು ಉಳಿಸಬೇಕೆಂದು ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಎನ್ನುವುದು ಒಂದು ಸ್ವಯತ್ತ ಸಂಸ್ಥೆ. ಇಲ್ಲಿ ಸರ್ವಾನುಮತದಿಂದ ಕೈಗೊಂಡ ನಿರ್ಣಯಗಳನ್ನು ವಿರೋಧಿಸುವುದು ಸರಿಯಾದ ಕ್ರಮವಲ್ಲ. ಆದರೆ, ಸಚಿವ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಆಯ್ಕೆ ವಿರೋಧಿಸಿದರು ಹಾಗೂ ಅನುದಾನವನ್ನು ತಡೆದಿರುವುದು ಪ್ರಜಾಪ್ರಭುತ್ವದ ವಿರೋಧಿ ಲಕ್ಷಣವಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News