×
Ad

ಜಂತುಹುಳ ನಿವಾರಣೆ: ಖತೀಬರಿಗೆ ಖಾಝಿ ಸೂಚನೆ

Update: 2020-02-07 20:42 IST

ಮಂಗಳೂರು, ಫೆ.7: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿದ ಇಲಾಖೆಗಳ ಸಹಭಾಗಿತ್ವದಲ್ಲಿ 19 ವರ್ಷದೊಳಗಿನ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈ ಬಗ್ಗೆ ಮಸೀದಿಯ ಖತೀಬರು ಆಯಾ ಜಮಾಅತ್‌ನ ಜನರಿಗೆ ಮಾಹಿತಿ ನೀಡಬೇಕು ಎಂದು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸೂಚಿಸಿದ್ದಾರೆ.

ಜಂತುಹುಳ ನಿವಾರಣೆಗಾಗಿ ‘ಅಲ್ಬೆಂಡಜೋಲ್’ ಮಾತ್ರೆಗಳನ್ನು ಸಮೀಪದ ಅಂಗನವಾಡಿ, ಸರಕಾರಿ ಶಾಲಾ-ಕಾಲೇಜುಗಳಲ್ಲಿ ವಿತರಿಸಲಾಗು ತ್ತಿದೆ. ಮಕ್ಕಳು ಮಾತ್ರೆ ಸೇವಿಸುವುದರಿಂದ ಪೌಷ್ಟಿಕಾಂಶ ಕೊರತೆ, ರಕ್ತಹೀನತೆ ನಿವಾರಣೆಯಾಗುತ್ತದೆ. ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಲು ಸಹಕಾರಿಯಾಗುತ್ತದೆ ಎಂದು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News