ಉಡುಪಿ: ಫೆ.8ರಂದು ರಾಷ್ಟ್ರೀಯ ಲೋಕ್ ಅದಾಲತ್
ಉಡುಪಿ, ಫೆ. 7: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರ ವತಿಯಿಂದ ಉಡುಪಿ ಜಿಲ್ಲೆ ಮತ್ತು ಕುಂದಾಪುರ ಹಾಗೂ ಕಾರ್ಕಳ ತಾಲೂಕು ನ್ಯಾಯಾಲಯಗಳ ಆವರಣಗಳಲ್ಲಿ ಫೆ.8, ಎ.11, ಜುಲೈ 11, ಸೆ.12 ಮತ್ತು ಡಿ.12ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ವನ್ನು ಆಯೋಜಿಸಲಾಗುತ್ತದೆ.
ಸಾರ್ವಜನಿಕರು ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಈ ಕೆಳಕಂಡ ಪ್ರಕರಣಗಳಿಗೆ ಲೋಕ್ ಅದಾಲತ್ ಮೂಲಕ ಪರಿಹಾರ ಪಡೆದುಕೊಳ್ಳಬಹುದಾಗಿದೆ.
ವ್ಯಾಜ್ಯ ಪೂರ್ವ ಪ್ರಕರಣಗಳು: ಚೆಕ್ ಅಮಾನ್ಯದ ಪ್ರಕರಣಗಳು ಯು/ಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈನ್‌ಟೆನೆನ್ಸ್ ಪ್ರಕರಣಗಳು, ಇತರ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಾಗೂ ಇತರೆ ಸಿವಿಲ್ ಪ್ರಕರಣಗಳು.
ಚೆಕ್ ಅಮಾನ್ಯದ ಪ್ರಕರಣಗಳು ಯು/ಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈನ್‌ಟೆನೆನ್ಸ್ ಪ್ರಕರಣಗಳು, ಇತರ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ) ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು: ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು ಯು/ಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಚ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಬೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕ್ಕದ್ದಮೆ).
ಈ ಪ್ರಕರಣಗಳನ್ನು ಲೋಕ್ ಅದಾಲತ್ ಮುಖಾಂತರ ಇತ್ಯರ್ಥ ಪಡಿಸಿ ಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.