×
Ad

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-02-07 22:02 IST

ಬೆಂಗಳೂರು, ಫೆ.7: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ.ಎನ್.ವಿ.ಪ್ರಸಾದ್ ಅವರನ್ನು ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹಾಗೂ ಬಿಎಂಆರ್‌ಡಿಎ ಆಯುಕ್ತರಾಗಿದ್ದ ವಿ.ಪಿ.ಇಕ್ಕೇರಿ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News