ಶಾಹೀನ್‌ಭಾಗ್ ಪ್ರತಿಭಟನಾಕಾರರ ತೆರವು ಕೋರಿದ್ದ ಅರ್ಜಿ ಫೆ.10ರಂದು ವಿಚಾರಣೆ
ಹೊಸದಿಲ್ಲಿ, ಫೆ.7: ದಿಲ್ಲಿಯ ಶಾಹೀನ್‌ಬಾಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಅಲ್ಲಿಂದ ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಅಡಚಣೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಭಟನೆಗೆ ಸಂಪೂರ್ಣ ನಿರ್ಬಂಧ ವಿಧಿಸುವ ಸಮಗ್ರ ಮಾರ್ಗದರ್ಶಿ ಸೂತ್ರವನ್ನು ರೂಪಿಸುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಫೆ.10(ಸೋಮವಾರ) ವಿಚಾರಣೆಗೆ ಎತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.
ಶಾಹೀನ್‌ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಂಧಿಸಿ ನ್ಯಾಯಾಲಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ನ್ಯಾಯವಾದಿ ಶಶಾಂಕ್ ದೇವ್ ಸುಧಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ನ್ಯಾಯಾಲಯ, ಅಲ್ಲಿ ಒಂದು ಸಮಸ್ಯೆ ಇರುವುದಾಗಿ ನಮಗೆ ತಿಳಿದಿದೆ . ಈ ಅರ್ಜಿಯನ್ನು ಸೋಮವಾರ ಕೈಗೆತ್ತಿಕೊಳ್ಳಲಾಗುವುದು ಎಂದಿತು.