ಕರ್ತವ್ಯ ಲೋಪ: ಕಡಬ ಠಾಣಾ ಎಎಸ್ಸೈ ಅಮಾನತು
Update: 2020-02-08 10:56 IST
ಕಡಬ, ಫೆ.8: ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಕಡಬ ಠಾಣಾ ಎಎಸೈಯನ್ನು ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಆದೇಶಿಸಿದ್ದಾರೆ.
ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂಬಾತ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ಆ್ಯಸಿಡ್ ಎರಚಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಡಬ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಸೈ ಚಂದ್ರಶೇಖರ್ ದೂರು ಸ್ವೀಕರಿಸದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ತನಿಖೆ ನಡೆಸಿದ ಪುತ್ತೂರು ಡಿವೈಎಸ್ಪಿ ದಿನಕರ್ ಶೆಟ್ಟಿ ನೀಡಿದ ವರದಿಯನ್ನು ಆಧರಿಸಿ ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀ ಪ್ರಸಾದ್ ಈ ಕ್ರಮ ಕೈಗೊಂಡಿದ್ದಾರೆ.