×
Ad

ಪಂಪ್ ವೆಲ್ ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಕಾರು: ಇಬ್ಬರಿಗೆ ಗಂಭೀರ ಗಾಯ

Update: 2020-02-08 18:14 IST

ಮಂಗಳೂರು: ಉಡುಪಿ ಕಡೆಯಿಂದ ಕಾಸರಗೋಡು ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಂಪ್ ವೆಲ್ ಫ್ಲೈ ಓವರ್ ನಿಂದ ಕೆಳಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಫ್ಲೈ ಓವರ್ ನ ಡಿವೈಡರ್ ಗೆ ಢಿಕ್ಕಿಯಾಗಿ ನಂತರ ಎದುರುನಿಂದ ಬರುತ್ತಿದ್ದ ಕಾರಿಗೂ ಢಿಕ್ಕಿಯಾಗಿ ಫ್ಲೈಓವರ್ ನಿಂದ ಕೆಳಗೆ ಬಿದ್ದಿದ್ದು, ಎರಡು ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಂಪ್ ವೆಲ್ ಫ್ಲೈ ಓವರ್ ಒಂದು ವಾರದ ಹಿಂದೆಯಷ್ಟೆ ಉದ್ಘಾಟನೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. 

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News