ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಟ್ರ್ಯಾಕ್ಟರ್: ಚಾಲಕ ಸೇರಿ ಇಬ್ಬರು ಮೃತ್ಯು

Update: 2020-02-08 14:13 GMT

ಚಿಕ್ಕಮಗಳೂರು, ಫೆ.8: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಒಂದು ಮನೆಯೊಳಗೆ ನುಗ್ಗಿ ಸಂಭವಿಸಿದ ಅಪಘಾತದಲ್ಲಿ ಚಾಲಕ ಸೇರಿದಂತೆ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಆಲ್ದೂರು ಪಟ್ಟಣದಿಂದ ಬಾಳೆಹೊನ್ನೂರು ಕಡೆಗೆ ಹೊರಟಿದ್ದ ಟ್ರ್ಯಾಕ್ಟರ್ ಆಲ್ದೂರು ಸಮೀಪದ ಕಣತಿ ಗ್ರಾಮದ ಸಮೀಪದಲ್ಲಿ ಬೆಟ್ಟದ ಮಳಲಿ ಎಂಬಲ್ಲಿರುವ ತಿರುವಿನಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯಲ್ಲಿದ್ದ ಮನೆಯೊಳಗೆ ನುಗ್ಗಿದೆ. ಈ ವೇಳೆ ಟ್ಯಾಕ್ಟರ್ ಚಾಲಕ ಹಾಗೂ ಆತನ ಜತೆಯಲ್ಲಿದ್ದ ಮತ್ತೋರ್ವ ವ್ಯಕ್ತಿ ತೀವ್ರ ಗಾಯಗಳೊಂದಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಘಟನೆ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News