ಫೆ.10: ಬಜೆಟ್‌ನಲ್ಲಿ ಅನುದಾನ ಹೆಚ್ಚಳಕ್ಕೆ ಆಗ್ರಹಿಸಿ ತಮಟೆ ಚಳವಳಿ

Update: 2020-02-08 14:31 GMT

ಬೆಂಗಳೂರು, ಫೆ.8: ಬಜೆಟನಲ್ಲಿ ದಲಿತರ ಅಭಿವೃದ್ಧಿಗೆ ಅನುದಾನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಫೆ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ತಮಟೆ ಚಳವಳಿ ಹಮ್ಮಿಕೊಂಡಿದೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಮಾತನಾಡಿ, ಕೇಂದ್ರ ಸರಕಾರದ ಬಜೆಟ್‌ನಲ್ಲಿ ಎಸ್ಸಿ, ಎಸ್ಟಿಗೆ ಮತ್ತು ಓಬಿಸಿಗಳ ಅಭಿವೃದ್ಧಿಗೆ ಕೇವಲ 84 ಸಾವಿರ ಕೋಟಿ ರೂ.ಅನುಧಾನ ನೀಡಿದೆ. ರಾಜ್ಯ ಸರಕಾರ ಇಂತಹ ಧೋರಣೆ ಅನುಸರಿಸದೆ ಹೆಚ್ಚಿನ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿದರು.

ಬೇಡಕೆಗಳು: ಎಸ್ಸಿ, ಎಸ್ಟಿ ಮೀಸಲಾತಿ ಶೇ.30 ರಷ್ಟು ಹೆಚ್ಚಿಸಬೇಕು. ದಲಿತರ ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು. ರಾಜ್ಯದಲ್ಲಿ ಬೋಗಸ್ ಜಾತಿ ಪ್ರಮಾಣದ ಪತ್ರ ಪಡೆದು ದಲಿತರ ಸೌಲಭ್ಯ ಪಡೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಒಟ್ಟು 20 ಬೇಡಿಕೆಗಳನ್ನ ಈಡೆರಿಸುವಂತೆ ಚಳವಳಿಯಲ್ಲಿ ಒತ್ತಾಯಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News