ಮುಂಬೈ ಬಾಗ್: 300 ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
ಮುಂಬೈ, ಫೆ.8: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮುಂಬೈ ಬಾಗ್ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು 300 ಅಜ್ಞಾತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಮುಂಬೈಬಾಗ್‌ನಲ್ಲಿ ಜನವರಿ 26ರಿಂದ ಪ್ರತಿಭಟನೆ ನಡೆಯುತ್ತಿದ್ದು ಇದರಿಂದ ಮೊರ್ಲಾಂಡ್ ರಸ್ತೆಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗೆ ಪ್ರತಿಭಟನೆಯಿಂದ ಅಡ್ಡಿಯಾಗಿದೆ . ಪ್ರತಿಭಟನಾಕಾರರು ಕಾನೂನು ಬಾಹಿರವಾಗಿ ರಸ್ತೆ ತಡೆ ನಿರ್ಮಿಸಿದ್ದರಿಂದ ಇಲ್ಲಿ ಸಂಚಾರ ವ್ಯವಸ್ಥೆಗೆ ತೊಡಕಾಗಿದೆ ಎಂದು ಬೃಹನ್ಮುಂಬಯಿ ಮುನಿಸಿಪಲ್ ಕಾರ್ಪೋರೇಶನ್‌ನ ಸಹಾಯಕ ನಗರಪಾಲಿಕೆ ಆಯುಕ್ತರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಐಪಿಸಿ 341 ಸೆಕ್ಷನ್, 34 ಸೆಕ್ಷನ್‌ನಡಿ ಹಾಗೂ ಮುಂಬೈ ಮುನಿಸಿಪಲ್ ಕಾರ್ಪೊರೇಶನ್ ಕಾಯ್ದೆ ಮತ್ತು ಕ್ರಿಮಿನಲ್ ಅಮೆಂಡ್‌ಮೆಂಟ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಭಟನಾಕಾರರು, ಇದೀಗ ಅಧಿಕಾರಿಗಳೆದುರು ತಮ್ಮನ್ನು ಪ್ರತಿನಿಧಿಸುವ ಉದ್ದೇಶದಿಂದ ಸಮಿತಿ ರಚಿಸುವ ಪ್ರಕ್ರಿಯೆ ಆರಂಭಿಸಲಾಗಿದ್ದು ಒಂದೆರಡು ದಿನದಲ್ಲೇ ಸಮಿತಿ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದ್ದಾರೆ.