ವಿಜಯ- ವಿಕ್ರಮ ಜೋಡುಕರೆ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Update: 2020-02-09 12:02 GMT

ಉಪ್ಪಿನಂಗಡಿ: 35ನೇ ವರ್ಷದ ಇಲ್ಲಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು ಫೆ.29ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಹಳೆಗೇಟುವಿನ ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿರುವ ಕಂಬಳ ಕರೆಯ ಬಳಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ,  ತುಳುನಾಡಿನ ಜನಪದ ಕಲೆ ಕಂಬಳವನ್ನು ಪ್ರವಾಸೋದ್ಯಮವಾಗಿ ಬೆಳೆಸಲು ಸರಕಾರಕ್ಕೆ ಒತ್ತಾಯಿಸಲು ವಿಜಯ- ವಿಕ್ರಮ ಕಂಬಳ ಸಮಿತಿ ನಿರ್ಧರಿಸಿದ್ದು, ಉಪ್ಪಿನಂಗಡಿ ಕಂಬಳಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವಥನಾರಾಯಣ, ರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರನ್ನೂ ಆಹ್ವಾನಿಸಲಾಗಿದೆ. ಆದರೆ ಅವರು ಬರುವುದು ಇನ್ನೂ ನಿಗದಿಯಾಗಿಲ್ಲ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರ ಅಧ್ಯಕ್ಷತೆಯಲ್ಲಿ ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ,  ಎಸ್‍ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ವಿವಿ ಕುಲಪತಿ ಸುಬ್ರಹ್ಮಣ್ಯ ಎಡಪಡಿತ್ತಾಯ, ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಎಬಿಸಿ ಟೆಕ್ನಾಲಜಿ ಟ್ರೈನಿಂಗ್‍ನ ಸ್ಥಾಪಕ ಮಂಜುನಾಥ ಆರಾಧ್ಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ಬಾರಿಯ ಕಂಬಳವನ್ನು ಹಿಂದೆಂದಿಗಿಂತಲೂ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಶಾಲಾ ವಿದ್ಯಾರ್ಥಿಗಳಿಗಾಗಿ ಕಂಬಳ ವೀಕ್ಷಿಸಲು ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಬೆಳಗ್ಗೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವಠಾರ ದಿಂದ ಕಂಬಳ ಕರೆಗೆ ಕಂಬಳ ಕೋಣಗಳ ಮೆರವಣಿಗೆ ನಡೆಯಲಿದ್ದು, ಗೊಂಬೆ ಕುಣಿತ, ತಟ್ಟಿರಾಯ, ಕೀಲು ಕುದುರೆ, ಚೆಂಡೆ, ನಾಸಿಕ್ ಬ್ಯಾಂಡ್ ಮೆರವಣಿಗೆಗೆ ಹೊಸ ಮೆರುಗು ನೀಡಲಿವೆ ಎಂದರು.

ಈ ಸಂದರ್ಭ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್ ಶೆಣೈ ಎನ್., ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ನೆಕ್ಕರೆ, ಪ್ರಧಾನ ಕಾರ್ಯ ದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ರಾಮಚಂದ್ರ ಮಣಿಯಾಣಿ, ವಿಠಲ ಶೆಟ್ಟಿ ಕೊಲ್ಯೊಟ್ಟು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಸಂಘಟನಾ ಕಾರ್ಯದರ್ಶಿ ಯೋಗೀಶ್ ಸಾಮಾನಿ ಸಂಪಿಗೆದಡಿ, ಪದಾಧಿಕಾರಿ ಗಳಾದ ಕೇಶವ ರಂಗಾಜೆ, ಜಯಾನಂದ ಪಿಲಿಗುಂಡ, ಆದರ್ಶ ಶೆಟ್ಟಿ ಕಜೆಕ್ಕಾರು, ದಿಲೀಪ್ ಕರಾಯ, ಜಯಪ್ರಕಾಶ್ ಬದಿನಾರು, ಶಿವಪ್ರಸಾದ್ ರೈ ಮಠಂತಬೆಟ್ಟು, ಜಗದೀಶ ಪುಳಿತ್ತಡಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News