ಸೋಮವಾರ ನಿಖಿಲ್ ಕುಮಾರಸ್ವಾಮಿ ವಿವಾಹ ನಿಶ್ಚಿತಾರ್ಥ

Update: 2020-02-09 15:21 GMT

ಬೆಂಗಳೂರು, ಫೆ. 9: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ನಿಶ್ಚಿತಾರ್ಥ ಸೋಮವಾರ(ಫೆ.10) ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆಯಲಿದೆ.

ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಅಣ್ಣನ ಮೊಮ್ಮಗಳು ರೇವತಿ ಅವರ ಜತೆ, ನಟ ನಿಖಿಲ್ ಅವರ ವಿವಾಹ ನಿಶ್ಚಿತಾರ್ಥ ನಡೆಯಲಿದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಅವರ ಕುಟುಂಬದ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಬೆಳಗ್ಗೆ 10:30ರಿಂದ ಮಧ್ಯಾಹ್ನ 2ಗಂಟೆಯ ವರೆಗೆ ನಗರದ ತಾಜ್ ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ವಿವಾಹ ನಿಶ್ಚಿತಾರ್ಥ ನಡೆಯಲಿದ್ದು, ಎರಡೂ ಕುಟುಂಬದ ಸದಸ್ಯರು, ಆಪ್ತರು ಸೇರಿದಂತೆ ಬಂಧು-ಮಿತ್ರರರು ಭಾಗವಹಿಸಲಿದ್ದಾರೆ ಎಂದು ಎಚ್‌ಡಿಕೆ ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News