ಲೋಕ ಅದಾಲತ್: 70,780 ಪ್ರಕರಣ ಇತ್ಯರ್ಥ

Update: 2020-02-09 16:39 GMT

ಬೆಂಗಳೂರು, ಫೆ.9: ರಾಜ್ಯ ವ್ಯಾಪ್ತಿಯಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 70,780 ಪ್ರಕರಣ ಇತ್ಯರ್ಥಗೊಂಡಿದ್ದು, ಈ ಪ್ರಕರಣಗಳಲ್ಲಿ ರಾಜಿಯಾದ ಮೊತ್ತ 253 ಕೋಟಿ ರೂ. ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ತಿಳಿಸಿದೆ.

ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣಗಳಲ್ಲಿ 65,291, ವ್ಯಾಜ್ಯಪೂರ್ವ 4,469 ಮತ್ತು ಹೈಕೋರ್ಟ್‌ನಲ್ಲಿ ಬಾಕಿ ಇದ್ದ 1,020 ಪ್ರಕರಣಗಳು ವಿಲೇವಾರಿಯಾಗಿವೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News