ಫೆ.10ರಿಂದ ಪ್ರಥಮ ಪಿಯು ಪರೀಕ್ಷೆ: ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರ ಪ್ರತಿಭಟನೆ
Update: 2020-02-09 22:19 IST
ಬೆಂಗಳೂರು, ಫೆ.9: ಪ್ರಥಮ ಪಿಯು ಪರೀಕ್ಷೆ ಫೆ.10ರಿಂದ 25ರವರೆಗೆ ನಡೆಯಲಿದ್ದು, ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಲಿದ್ದೇವೆ ಎಂದು ಎಂದು ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.
ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದಿಂದ ಇದು ಮೂರನೇ ಹಂತದ ಪ್ರತಿಭಟನೆಯಾಗಿದ್ದು, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಹ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು, ರಾಜ್ಯ ಸರಕಾರ ಎಚ್ಚೆತ್ತುಕೊಂಡು ಪದವಿಪೂರ್ವ ಕಾಲೇಜು ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಇಲ್ಲದಿದ್ದರೆ ಪ್ರಥಮ ಹಾಗೂ ದ್ವೀತೀಯ ಪಿಯುಸಿ ಮೌಲ್ಯಮಾಪನ ಬಹಿಷ್ಕಾರದ ತನಕವೂ ಪರಿಸ್ಥಿತಿ ಹೋಗಲಿದೆ ಎಂದು ತಿಳಿಸಿದರು.