ಬಜೆಟ್‌ನಲ್ಲಿ ದಲಿತರ ಅಭಿವೃದ್ಧಿಗೆ ಶೇ.30 ರಷ್ಟು ಹಣ ನಿಗದಿ ಪಡಿಸುವಂತೆ ಆಗ್ರಹಿಸಿ ಧರಣಿ

Update: 2020-02-10 18:09 GMT

ಬೆಂಗಳೂರು, ಫೆ.10: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ದಲಿತರ ಅಭಿವೃದ್ಧಿಗೆ ಶೇ.30 ರಷ್ಟು ಹಣ ನಿಗದಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ ಸದಸ್ಯರು, ಜನಸಂಖ್ಯೆಗೆ ಅನುಗುಣವಾಗಿ ಶೇ.30 ರಷ್ಟು ಹಣವನ್ನು ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ಮೀಸಲಿಡಬೇಕೆಂದು ಒತ್ತಾಯ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಎನ್.ಮೂರ್ತಿ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ, ಬೋವಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಿ ಬಾಬು ಜಗಜೀವನರಾಮ್ ಅಭಿವೃದ್ಧಿ ನಿಗಮವನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ಆರಂಭಿಸಬೇಕೆಂದು ಆಗ್ರಹಿಸಿದರು.

ನಕಲಿ ಜಾತಿ ಪತ್ರ ಪಡೆದು ದಲಿತರ ಸೌಲಭ್ಯ ಕಬಳಿಸಿದ 50 ಸಾವಿರ ಪ್ರಕರಣಗಳಿದ್ದು, ಅವುಗಳ ಇತ್ಯರ್ಥ್ಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಖಾಲಿ ಇರುವ ಬ್ಯಾಗ್‌ಲ್ಯಾಗ್ ಹುದ್ದೆ ಕೂಡಲೇ ಭರ್ತಿ ಮಾಡಬೇಕು ಎಂದರು.

ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕೆಂದು ಆಗ್ರಹಿಸಿದ ಅವರು, ರಾಜ್ಯದ ಎಲ್ಲ ವಿಶ್ವ ವಿದ್ಯಾನಿಲಯಗಳಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಜೀವನ ಸಾಧನೆ ಸಂಶೋಧನೆಗೆ ಹಣ ನೀಡಬೇಕು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News