×
Ad

"ಫೆ.13ರ ಕರ್ನಾಟಕ ಬಂದ್‌ಗೆ ಬೆಂಬಲವಿಲ್ಲ"

Update: 2020-02-11 17:43 IST

ಬೆಂಗಳೂರು, ಫೆ.11: ವಿವಿಧ ಸಂಘಟನೆಗಳು ಫೆ.13ರಂದು ಹಮ್ಮಿಕೊಂಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕ ಹೋರಾಟಗಾರರ ಒಕ್ಕೂಟ ಬೆಂಬಲ ನೀಡುವುದಿಲ್ಲ ಎಂದು ಒಕ್ಕೂಟದ ಸಂಸ್ಥಾಪಕ ರಾಜ್ಯಾಧ್ಯಕ್ಷ ಕನ್ನಡಸಿರಿ ಆನಂದ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಿವಿಧ ಸಂಘಟನೆಗಳು 99 ದಿನಗಳಿಂದ ಡಾ. ಸರೋಜಿನಿ ಮಹಿಷಿ ವರದಿ ವಿಚಾರವಾಗಿ ಐಟಿ, ಬಿಟಿ ಹಾಗೂ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಜಾರಿಯಾಗಲಿ ಎಂದು ಹೋರಾಟ ಮಾಡುತ್ತಿರುವದಕ್ಕೆ ನಮ್ಮ ಬೆಂಬಲವಿದೆ. ಆದರೆ, ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವುದು ಖಂಡನೀಯ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಸುಮಾರು ವರ್ಷಗಳಿಂದ ಹಲವಾರು ಬಂದ್‌ಗಳು ನಡೆದಿವೆ. ಆದರೆ, ಬಂದ್‌ನಿಂದ ಈವರೆಗೂ ಯಾವುದೇ ಬೇಡಿಕೆಗಳು ಅನುಷ್ಠಾನವಾಗಿಲ್ಲ. ಈ ರೀತಿಯ ಅವೈಜ್ಞಾನಿಕ ಬಂದ್‌ನಿಂದ ಸಣ್ಣ ವ್ಯಾಪಾರಿಗಳಿಗೆ, ರೈತರಿಗೆ ಹಾಗೂ ಸರಕಾರಕ್ಕೆ ಸಾಕಷ್ಟು ನಷ್ಟ ಉಂಟಾಗಲಿದೆ. ಆದ್ದರಿಂದ ಈ ರೀತಿಯ ಬಂದ್ ವಿರೋಧಿಸಿ ಫೆ.12ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಪುರಭವನದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News