×
Ad

ಇಬ್ಬರು ಪೊಲೀಸರಿಂದ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ: ಆರೋಪ

Update: 2020-02-11 18:39 IST

ಬೆಂಗಳೂರು, ಫೆ.11: ಹೊಟೇಲ್ ಬಾಗಿಲು ಬಂದ್ ಮಾಡುವ ವಿಚಾರವಾಗಿ ಹೊಟೇಲ್ ಸಿಬ್ಬಂದಿ ಮೇಲೆ ಇಬ್ಬರು ಪೊಲೀಸ್ ಪೇದೆಗಳು ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

ಇಲ್ಲಿನ ಪುಟ್ಟೇನಹಳ್ಳಿ ಮುಖ್ಯರಸ್ತೆಯ ಅಪರಂಜಿ ಬಿರಿಯಾನಿ ಮನೆ ಹೊಟೇಲ್ ಸಿಬ್ಬಂದಿ ಅಭಿ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಸೋಮವಾರ ತಡರಾತ್ರಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಬೈಕ್‌ನಲ್ಲಿ ಬಂದು, ಅಭಿ ಅವರ ಹೊಟೇಲ್ ಬಂದ್ ಮಾಡಿ, ಇಲ್ಲ ಹಣ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ, ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ವಿಚಾರ ತಿಳಿದ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್, ಘಟನೆಯ ಕುರಿತು ತನಿಖೆ ನಡೆಸುವಂತೆ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿಗೆ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News