ದಿಲ್ಲಿ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ: ಮಮತಾ ಬ್ಯಾನರ್ಜಿ
Update: 2020-02-11 20:06 IST
ಕೋಲ್ಕತಾ, ಫೆ. 11: ದಿಲ್ಲಿ ವಿಧಾನ ಸಭೆ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ಅವರನ್ನು ಅಭಿನಂದಿಸಿರುವ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.
‘‘ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ಅಭಿನಂದಿಸಿದ್ದೇನೆ. ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅವರು ಕೇವಲ ಅಭಿವೃದ್ಧಿಗೆ ಮಾತ್ರ ಬೆಂಬಲವಾಗಿ ನಿಂತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ರಾಷ್ಟ್ರೀಯ ಜನಸಂಖ್ಯೆ ನೋಂದಣಿಯನ್ನು ತಿರಸ್ಕರಿಸಲಾಗುವುದು’’ ಎಂದು ಅವರು ಹೇಳಿದರು.
ಪಶ್ಚಿಮಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿ ಇದ್ದರು. ಅಲ್ಲದೆ, ಸಿಎಎ ಹಾಗೂ ಎನ್‌ಆರ್‌ಸಿಯನ್ನು ತಾನು ಅನುಷ್ಠಾನಗೊಳಿಸುವುದಿಲ್ಲ ಎಂದು ಹೇಳಿದ್ದರು.