ಎಸ್‌ಎಲ್‌ಆರ್‌ಎಂ ಕಾರ್ಯಕರ್ತರ ಕಾರ್ಯದಕ್ಷತೆ ಹೆಚ್ಚಳ ಕಾರ್ಯಾಗಾರ
ಉಡುಪಿ, ಫೆ.11: ಸ್ವಚ್ಛತೆಯ ಕಾರ್ಯ ಪುಣ್ಯದ ಕಾರ್ಯ. ಈ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹಾಗೂ ಉತ್ತಮ ಮನಸಿದ್ದರೆ ಮಾತ್ರ ಸಾಧ್ಯ. ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರಲು ತಮ್ಮ ಸೇವೆಯೇ ಕಾರಣ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್‌ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯಕರ್ತರಿಗೆ ತಮ್ಮ ಕಾರ್ಯದಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಸ್ವಚ್ಛತೆಯ ಕೆಲಸ ದೇವರ ಕೆಲಸ ಹಾಗೂ ಇದು ಬಹಳ ವಿತ್ರವಾದ ಕಾರ್ಯ ಎಂದು ತಿಳಿಸಿದರು.
ಈ ಕಾರ್ಯಾಗಾರದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಸಮಾಲೋಚಕ ರಘುನಾಥ್ ಕಾರ್ಯಕ್ರಮ ನಿರ್ವಹಿಸಿದರು.