ಸಿಎಎ ವಿರೋಧಿ ನಾಟಕ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಹೀನ್ ಶಾಲಾ ಆಡಳಿತ ಮಂಡಳಿ

Update: 2020-02-11 15:15 GMT

ಬೀದರ್, ಫೆ.11: ಸಿಎಎ ವಿರೋಧಿಸಿ ಬೀದರ್‌ನ ಶಾಹೀನ್ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಮಕ್ಕಳು ನಾಟಕ ಪ್ರದರ್ಶಿಸಿದ್ದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೇಶದ್ರೋಹ ಪ್ರಕರಣ ರದ್ದು ಕೋರಿ ಶಾಲಾ ಆಡಳಿತ ಮಂಡಳಿಯವರು ಹೈಕೋರ್ಟ್ ಕಲಬುರ್ಗಿ ಪೀಠದ ಮೆಟ್ಟಿಲೇರಿದ್ದಾರೆ.

ಐಪಿಸಿ 124(ಎ), 153 (ಎ), 504, 505 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇಶದ್ರೋಹವೆಸಗುವ ಘಟನೆ ಅಲ್ಲಿ ನಡೆದಿಲ್ಲ. ಹೀಗಾಗಿ ಎಫ್‌ಐಆರ್ ರದ್ದುಪಡಿಸಬೇಕು ಎಂದು ಶಾಹೀನ್ ಶಿಕ್ಷಣ ಸಂಸ್ಥೆ ಪರ ವಕೀಲರು ಹೈಕೋರ್ಟ್ ಕಲಬುರ್ಗಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಇದರ ಬಗ್ಗೆ ವಿವರ ನೀಡುವಂತೆ ಸರಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

ಶಾಹೀನ್ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ಮಕ್ಕಳಿಂದ ನಾಟಕ ಮಾಡಿಸಿ, ಚಪ್ಪಲಿ ತೋರಿಸಿ ಪ್ರಧಾನಿಯನ್ನು ಅವಹೇಳನ ಮಾಡಲಾಗಿದೆ ಎಂದು ಬಾಲಕಿಯ ತಾಯಿ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News