ಫೆ.15ರಂದು ಸಾರ್ವಜನಿಕ ಜನಸಂಪರ್ಕ ಸಭೆ
Update: 2020-02-11 21:15 IST
ಉಡುಪಿ, ಫೆ.11: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕಿನ ಪೆರ್ಡೂರು, ಕುಕ್ಕೇಹಳ್ಳಿ, ಬೈರಂಪಳ್ಳಿ, ಬೊಮ್ಮರಬೆಟ್ಟು, ಆತ್ರಾಡಿ, ಅಂಜಾರು, 82 ಕುದಿ ಗ್ರಾಮಗಳಿಗೆ ಸಂಬಂಧಪಟ್ಟಂತೆ ಕಂದಾಯ ಅದಾಲತ್ ಹಾಗೂ ಸಾರ್ವಜನಿಕ ಜನಸಂಪರ್ಕ ಸಭೆಯು ಫೆ.15ರಂದು ಬೆಳಗ್ಗೆ 11 ಗಂಟೆಗೆ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಎಲ್ಲಾ ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಕುಂದಾಪುರ ಸಹಾಯಕ ಕಮೀಷನರ್, ಕಾಪು ಶಾಸಕರು, ಎಲ್ಲಾ ಜನಪ್ರತಿ ನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಉಡುಪಿ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.