ಸರಕಾರದಿಂದ ಸಾಮೂಹಿಕ ವಿವಾಹ: ಹೆಸರು ನೋಂದಣಿಗೆ ಮಾರ್ಚ್ 27 ಕೊನೆಯ ದಿನ
ಬೆಂಗಳೂರು, ಫೆ. 11: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಸರಕಾರದಿಂದ ನಡೆಸಲು ಉದ್ದೇಶಿಸಿರುವ ಸಾಮೂಹಿಕ ವಿವಾಹಕ್ಕೆ ವಧು-ವರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಮಾರ್ಚ್ 27 ಕೊನೆಯ ದಿನವಾಗಿದೆ ಎಂದು ತಿಳಿಸಲಾಗಿದೆ.
ಎಪ್ರಿಲ್ 4 ರಂದು ನಗರದ ಬನಶಂಕರಿ ದೇವಾಲಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರಿಗೆ ಸರಕಾರದಿಂದ ವರನಿಗೆ 5 ಸಾವಿರ ರೂ., ವಧುವಿಗೆ 10 ಸಾವಿರ ರೂ., ಪ್ರೋತ್ಸಾಹ ಧನ, ವಧುವಿಗೆ ಚಿನ್ನದ ತಾಳಿ ಮತ್ತು ಚಿನ್ನದ ಗುಂಡು ಕೊಂಡುಕೊಳ್ಳಲು 40 ಸಾವಿರ ರೂ.ಸೇರಿ ಒಟ್ಟು 55 ಸಾವಿರ ರೂ.ನೀಡಲಾಗುವುದು.
ನಿಗದಿತ ಅರ್ಜಿ ನಮೂನೆ ಮತ್ತು ಷರತ್ತುಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 080-2671 4989, ಬನಶಂಕರಿ ದೇವಸ್ಥಾನ, ಎಸ್.ಕರಿಯಪ್ಪ ರಸ್ತೆ, ಬೆಂಗಳೂರು-70 ಇಲ್ಲಿನ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬನಶಂಕರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.